ಟಾಲಿವುಡ್ ಅಂಗಳದಲ್ಲಿ ಮತ್ತೊಂದು ಬ್ರೇಕ್ ಅಪ್ ಸುದ್ದಿ ಹರಿದಾಡುತ್ತಿದೆ. ತೆಲುಗಿನ ಖ್ಯಾತ ನಟ ಶರ್ವಾನಂದ್ ಇತ್ತೀಚಿಗಷ್ಟೇ ಅದ್ದೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಆದರೆ ಈ ಎಂಗೇಜ್ ಮೆಂಟ್ ಮುರಿದು ಬಿದಿದ್ದೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟ ಶರ್ವಾನಂದ್, ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. ಇತ್ತೀಚಿಗಷ್ಟೇ ರಕ್ಷಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದರು.
ಈ ವರ್ಷದ ಆರಂಭ ಜನವರಿಯಲ್ಲಿ ಗುರುಹಿರಿಯರು ಸಮ್ಮತಿಸಿದ ಹುಡುಗಿ ರಕ್ಷಿತಾ ಶರ್ವಾನಂದ್ ಎಂಗೇಜ್ ಆಗಿದ್ದರು. ಆದರೆ ಈಗ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಈ ನಿಶ್ಚಿತಾರ್ಥ ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಈ ಸುದ್ದಿಯನ್ನ ಶರ್ವಾನಂದ್ ಕಡೆಯವರು ಸ್ಪಷ್ಟನೆ ನೀಡಿದ್ದು ಶರ್ವಾನಂದ್- ರಕ್ಷಿತಾ ನಡುವೆ ಸಂಬಂಧ ಚೆನ್ನಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಷ್ಟೇ, ಲಂಡನ್ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳನ್ನ ಮುಗಿಸಿ, ಮದುವೆ ಆಗ್ತಾರೆ ಎಂದಿದ್ದಾರೆ.