ಬೆಂಗಳೂರು: ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿಗೆ ಡಿಸಿಎಂ ಸ್ಥಾನ ಕೊಡಬೇಕು ಎಂದು ಕರ್ನಾಟಕ ರೆಡ್ಡಿ ಜನಸಂಘದ ನಿರ್ದೇಶಕ ರಾಮಚಂದ್ರರೆಡ್ಡಿ ಆಗ್ರಹಿಸಿದ್ದಾರೆ. ರಾಮಲಿಂಗಾರೆಡ್ಡಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ. ಸಿದ್ದರಾಮಯ್ಯ, ಡಿಕೆಶಿಗಿಂತಲೂ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಬಿಎಸ್ವೈ ಇದ್ದಾಗ ರೆಡ್ಡಿ ಸಮಾಜದ ಮೂವರನ್ನು ಮಂತ್ರಿ ಮಾಡ್ತಿದ್ದರು.
ಕಳೆದ ಬಾರಿ ಒಬ್ಬರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಬಿಜೆಪಿ ಅನುಭವಿಸಿದೆ. ಹೀಗಾಗಿ ರಾಮಲಿಂಗಾರೆಡ್ಡಿಯನ್ನು ಉಪಮುಖ್ಯಮಂತ್ರಿ ಮಾಡಲೇಬೇಕು. ಇಬ್ಬರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ರಾಮಚಂದ್ರರೆಡ್ಡಿ ಆಗ್ರಹಿಸಿದ್ದಾರೆ. ಈಗಾಗಲೇ ಎಐಸಿಸಿಗೆ ನಾವು ಪತ್ರ ಬರೆದು ಆಗ್ರಹ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಒಪ್ಪದಿದ್ರೆ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ರೆಡ್ಡಿ ಸಮುದಾಯದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.