ಬೆಂಗಳೂರು: ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಸವರಾಜ್ ಬೊಮ್ಮಾಯಿ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಬಿಜೆಪಿಯ ಹೀನಾಯ ಸೋಲಿನ ಬಗ್ಗೆ ಯಡಿಯೂರಪ್ಪ ಜೊತೆ ಸಾಕಷ್ಟು ಸಮಯ ಬೊಮ್ಮಾಯಿ ಅವರು ಚರ್ಚೆ ನಡೆಸಿದರು. ಇನ್ನೂ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಪಲಿತಾಂಶ ಮೇ 13 ರಂದು ಪ್ರಕಟವಾಗಿದ್ದು, 136 ಸ್ಥಾನಗಳನ್ನು ಪಡೆದು ಕಾಂಗ್ರೆಸ್ ಬಹುಮತ ಪಡೆದರೆ, ಬಿಜೆಪಿ & ಜೆಡಿಎಸ್ ಅಂತೂ ತುಂಬಾ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಇನ್ನೂ ನಿರೀಕ್ಷೆಗೂ ಮೇರಿ ಕಾಂಗ್ರೆಸ್ ಪಕ್ಷವು 136 ಸ್ಥಾನ ಪಡೆದು ಸರ್ಕಾರ ರಚಿಸಲು ಎಲ್ಲಾ ತಯಾರಿ ನಡೆಸುತ್ತಿದೆ.