ವಿಜಯನಗರ : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಸರತ್ತು ಜೋರಾಗಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮೆಗಾ ಫೈಟ್ ನಡೆಯುತ್ತಿದೆ. ಇದರ ನಡುವೆ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಸಿಗುವುದು ಖಚಿತ ಎನ್ನಲಾಗುತ್ತಿದೆ.
ಹೌದು, ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂದು ಮೈಲಾರ ಕಾರ್ಣಿಕ ನುಡಿದ ಭವಿಷ್ಯ ನಿಜವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಮೈಲಾರಲಿಂಗ ದೇಗುಲದಲ್ಲಿ ಪ್ರತಿ ಕಾರ್ಣಿಕ ವಿಧಿವಿಧಾನ ನಡೆಯುತ್ತದೆ. ಈ ವೇಳೆ ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್’ ಕಾರಣಿಕ ನುಡಿದಿದ್ದರು. ಅಂದರೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದಲ್ಲಿ ನಿಷ್ಠೆಯಿಂದಿರುವ ನಾಯಕರಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿಯಲಾಗಿದೆ ಎಂದು ವಿಶ್ಲೇಷಿಸಲಾಗಿತ್ತು, ಇದೀಗ ಈ ಭವಿಷ್ಯ ನಿಜವಾಗುವ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶವನ್ನು ಪಡೆದ ಕೆಲವು ದಿನಗಳ ನಂತರ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಸಸ್ಪೆನ್ಸ್ ಮುಂದುವರೆದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಒಬ್ಬರಾದ ಡಿ.ಕೆ.ಶಿವಕುಮಾರ್ ಅವರು ಪಕ್ಷದ ರಾಷ್ಟ್ರೀಯ ನಾಯಕತ್ವಕ್ಕೆ ತಮ್ಮ ವಾದವನ್ನು ಮಂಡಿಸಲು ಇಂದು ದೆಹಲಿಗೆ ಹಾರುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಪಕ್ಷವು ಅಂತಿಮ ಘೋಷಣೆ ಮಾಡುವ ಮೊದಲು ನಿನ್ನೆ ದೆಹಲಿಗೆ ತೆರಳಿದ್ದಾರೆ.
ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಆಸೆ : ಡಿ.ಕೆ. ಸುರೇಶ್
ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಆಸೆ ಎಂದು ಸಹೋದರ, ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬುದು ನನ್ನ ಆಸೆ. ಸಂಕಷ್ಟದ ಸಂದರ್ಭದಲ್ಲಿ ಪಕ್ಷ ನಡೆಸುವ ಜವಾಬ್ದಾರಿ ನೀಡಿದ್ದರು. ಡಿ.ಕೆ. ಶಿವಕುಮಾರ್ ಗೆ ಸೋನಿಯಾ ಗಾಂಧಿ ಪಕ್ಷದ ಜವಾಬ್ದಾರಿ ನೀಡಿದ್ದರು.ನಿಮ್ಮ ಮೇಲೆ ನಂಬಿಕೆ ಇದೆ. ವಿಶ್ವಾಸವಿದೆ ಎಂದು ವರಿಷ್ಠರು ಹೇಳಿದ್ದರು. ಕೊಟ್ಟ ಜವಾಬ್ದಾರಿಯನ್ನು ಡಿ.ಕೆ. ಶಿವಕುಮಾರ್ ನಿಭಾಯಿಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ 135 ಸ್ಥಾನ ಗೆಲ್ಲಲು ಡಿ.ಕೆ. ಶಿವಕುಮಾರ್ ಶ್ರಮಿಸಿದ್ದಾರೆ. ಡಿ.ಕೆ. ಶಿವಕುಮಾರ್ ಹಿಂದೆ ಕಿರುಕುಳ, ಅವಮಾನ, ನಿಂದನೆಗಳನ್ನು ಎದುರಿಸಿದ್ದಾರೆ. ಎಲ್ಲವನ್ನು ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ಶ್ರಮಕ್ಕೆ ಕೂಲಿ ನೀಡುವಂತೆ ಕೇಳಿದ್ದಾರೆ ಎಂದು ಹೇಳಿದ್ದಾರೆ.