ಬೆಂಗಳೂರು: ಶೀಘ್ರದಲ್ಲೇ ಸಿಬಿಐ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಳ್ಳುವೆ ಎಂದು ಪ್ರವೀಣ್ ಸೂದ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಅಧಿಕಾರವನ್ನು ಶೀಘ್ರದಲ್ಲಿಯೇ ಹಸ್ತಾಂತರ ಮಾಡುತ್ತೇನೆ. ಕರ್ನಾಟಕ ಡಿಜಿ, ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆ ನಿರ್ವಹಣೆಯಿಂದ ಹೊರಬರುತ್ತಿದ್ದೇನೆ. ಇವು ಕರ್ನಾಟಕ ಡಿಜಿ ಆಯಂಡ್ ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಇದು ಕೊನೆಯ ಟ್ವೀಟ್ ಆಗಿವೆ ಎಂದು ಬರೆದುಕೊಂಡಿದ್ದಾರೆ. 2020ರಲ್ಲಿ ಈ ಖಾತೆಯ ನಿರ್ವಹಣೆಯನ್ನು ಪ್ರಾರಂಭಿಸಿದ್ದೆ.
ಸಾಕಷ್ಟು ವಿಷಯಗಳ ಬಗ್ಗೆ ನಿಮ್ಮೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದೇನೆ. 1.6 ಲಕ್ಷ ಜನ ಈ ಖಾತೆಯನ್ನ ಅನುಸರಿಸುತ್ತಿರುವುದು ತುಂಬಾ ಖುಷಿಕೊಟ್ಟಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ಪೊಲೀಸರಿಗೆ ಸಂಬಂಧಿಸಿದ ಅಧಿಕೃತ ವಿಷಯಗಳ ಕುರಿತು ನಿಮ್ಮ ಪ್ರತಿಕ್ರಿಯೆಗಳಿಗಾಗಿ ತುಂಬಾ ಧನ್ಯವಾದಗಳು. ನಾನು ನನ್ನ ವೈಯಕ್ತಿಕ ಟ್ವಿಟರ್ ಅಕೌಂಟ್ ಬಳಸುವುದನ್ನು ಮುಂದುವರಿಸುತ್ತೇನೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.