ಬೀಜಿಂಗ್: ಹಿಂದೂ ಮಹಾಸಾಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚೀನಾದ ಮೀನುಗಾರಿಕಾ ದೋಣಿ ಮುಳುಗಿದ್ದು ಅದರಲ್ಲಿದ್ದ ಎಲ್ಲಾ 39 ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.
ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಮುಳುಗಡೆ ಸಂಭವಿಸಿದ್ದು ದೋಣಿಯಲ್ಲಿದ್ದ ಚೀನಾದ 17, ಇಂಡೋನೇಷ್ಯಾದ 17 ಮತ್ತು ಫಿಲಿಪೈನ್ಸ್ನ ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಚೀನಾದ ನಾಯಕ ಕ್ಸಿ ಜಿನ್ಪಿಂಗ್ ಮತ್ತು ಪ್ರಧಾನಿ ಲಿ ಕಿಯಾಂಗ್ ಅವರು ವಿದೇಶದಲ್ಲಿರುವ ಚೀನೀ ರಾಜತಾಂತ್ರಿಕರಿಗೆ, ಹಾಗೆಯೇ ಕೃಷಿ ಮತ್ತು ಸಾರಿಗೆ ಸಚಿವಾಲಯಗಳಿಗೆ ಬದುಕುಳಿದವರ ಹುಡುಕಾಟದಲ್ಲಿ ಸಹಾಯ ಮಾಡಲು ಮನವಿ ಮಾಡಿದ್ದಾರೆ.
ಲುಪೆಂಗ್ಲೈಯುವಾನ್ಯು ಎಂಬ ದೋಣಿ ಶಾಂಡೊಂಗ್ನ ಪೂರ್ವ ಪ್ರಾಂತ್ಯದಲ್ಲಿ ನೆಲೆಗೊಂಡಿತ್ತು ಇದನ್ನು ಪೆಂಗ್ಲೈಯಿಂಗ್ಯು ಕಂ. ಲಿಮಿಟೆಡ್ ನಿರ್ವಹಿಸುತ್ತಿತ್ತು ಎಂದು ತಿಳಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.