ಬೆಂಗಳೂರು: ನಾನು ಕೂಡ ಸಿಎಂ, ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಈಗ ಹೈಕಮಾಂಡ್ನವರು ಸಿಎಂ, ಡಿಸಿಎಂ ಘೋಷಣೆ ಮಾಡಿದ್ದಾರೆ. ಮುಂದೆ ಏನಾದರೂ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ನೋಡೋಣ ಎಂದು ಬೆಂಗಳೂರಿನಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ (Parameshwar)ತಿಳಿಸಿದರು. ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿ 2ನೇ ಬಾರಿಗೆ ಸಿಎಂ ಆಗುತ್ತಿದ್ದಾರೆ.
ಅವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಲಿ. ದಲಿತ ಸಮುದಾಯದ ನಿರೀಕ್ಷೆ ಬಹಳ ದೊಡ್ಡದಿದೆ. ಅದನ್ನು ಅರ್ಥಮಾಡಿಕೊಂಡು ವರಿಷ್ಠರು ತೀರ್ಮಾನ ಮಾಡುತ್ತಾರೆ. ಮಾಡದಿದ್ದರೆ ಸ್ವಾಭಾವಿಕವಾಗಿ ಸಮುದಾಯ ಪ್ರತಿಕ್ರಿಯೆ ಇದ್ದೇ ಇರುತ್ತೆ. ಪ್ರತಿಕ್ರಿಯೆ ಬರುವ ಮೊದಲೇ ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎಂದು ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ವರಿಷ್ಠರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದರು.