ಬಾಲಿವುಡ್ ನಟ ಸಲ್ಮಾನ್ ಖಾನ್ ಸದ್ಯ ‘ಟೈಗರ್ 3’ ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಅವರ ಎಡ ಭುಜಕ್ಕೆ ಗಾಯವಾಗಿದ್ದು ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ವಿಶ್ರಾಂತಿ ಪಡೆಯುತ್ತಿದ್ದಾರೆ.
‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರದ ಸೋಲಿನ ನಂತರ ‘ಟೈಗರ್ 3’ ಸಿನಿಮಾದ ಚಿತ್ರೀಕರಣದಲ್ಲಿ ಸಲ್ಮಾನ್ ಭಾಗಿಯಾಗಿದ್ದಾರೆ. ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್, 5 ಕೆಜಿ ತೂಕದ ಡಂಬೆಲ್ ಅನ್ನು ಎತ್ತಿದ ಬಳಿಕ ಅವರ ಎಡ ಭುಜಕ್ಕೆ ಏಟಾಗಿದೆ. ಗಾಯಗಳಾಗಿದ್ದು ಅದಕ್ಕೆ ಸೂಕ್ತ ಚಿಕಿತ್ಸೆಯನ್ನ ಕೂಡ ಪಡೆದಿದ್ದಾರೆ. ಈ ಕುರಿತು ನಟ ಪೋಸ್ಟ್ ಹಂಚಿಕೊಂಡಿದ್ದಾರೆ.
ನೀವು ಪ್ರಪಂಚದ ಭಾರವನ್ನು ನಿಮ್ಮ ಹೆಗಲ ಮೇಲೆ ಹೊತ್ತುಕೊಂಡಿದ್ದೀರಿ ಎಂದು ನೀವು ಭಾವಿಸಿದರೆ, ಇಹಲೋಕ ತ್ಯಜಿಸಿ 5 ಕೆಜಿ ಡಂಬೆಲ್ ಎತ್ತಿ ತೋರಿಸಿ ಎಂದಿದ್ದಾರೆ. ಹುಲಿ ಗಾಯಗೊಂಡಿದೆ ಎಂದು ಸಲ್ಮಾನ್ ಖಾನ್ ಬರೆದುಕೊಂಡಿದ್ದಾರೆ. ಸಲ್ಮಾನ್ ಖಾನ್ ಪೋಸ್ಟ್ ಗೆ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದು ಬೇಗ ಚೇತರಿಸಿಕೊಳ್ಳುವಂತೆ ತಿಳಿಸಿದ್ದಾರೆ.