ಮಂಗಳೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣದಲ್ಲಿ ಹಲ್ಲೆ ನಡೆಸಲು ಪೊಲೀಸರ ಮೇಲೆ ಒತ್ತಡ ಹಾಕಿದ ವಿಚಾರವಾಗಿ ರಾಜಕೀಯ ಕೆಸರೆರೆಚಾಟ ಶರುವಾಗಿದೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ದೌರ್ಜನ್ಯ ನಡೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರೇ, ಬಿಜೆಪಿ ನಾಯಕರ ಒತ್ತಡದಿಂದಲೇ ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಇನ್ನು ಎರಡು ದಿನದಲ್ಲಿ ಒತ್ತಡ ಹಾಕಿದವರ ಹೆಸರು ಬಹಿರಂಗ ಪಡಿಸುವೆ ಎಂದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಈ ಮಧ್ಯೆ ಪುತ್ತೂರು ಡಿವೈಎಸ್ಪಿ ಜೊತೆಗೆ ಪಿಎಸ್ಐ, ಕಾನ್ಸ್ಟೇಬಲ್ ಅವರನ್ನು ಅಮಾನತು ಮಾಡಬೇಕು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ 307 ಕೇಸ್ ದಾಖಲಿಸುವಂತೆ ಬಜರಂಗದಳ ಒತ್ತಾಯ ಮಾಡಿದೆ. ಅಮಾನತು ಮಾಡದಿದ್ದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.