ಕರ್ನಾಟಕದ ಸಿಎಂ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕೇ ಬಿಡ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ. ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಲ್ಲಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆಯ ಪ್ರಶ್ನೆಯೊಂದು ಎದುರಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಸಿದ್ದು ಜೊತೆಗೆ ಪಕ್ಷದಲ್ಲಿ 135 ಶಾಸಕರು ಜಯಶೀಲರಾಗಿದ್ದಾರೆ. ಗೆದ್ದಂತಹ ಶಾಸಕರಲ್ಲಿ ಬಹುತೇಕ ಹಿರಿಯ ಶಾಸಕರೇ ಇದ್ದಾರೆ. ಆದ್ದರಿಂದ ಸಂಪುಟದಲ್ಲಿ ಅವರಿಗೆ ತಮ್ಮ ಸ್ಥಾನ ನಿಡಬೇಕಾದ ಅನಿವಾರ್ಯತೆ ಎದುರಾಗಿದೆ. ಸಿಎಂ ಯಾರು? ಎಂಬುವುದಕ್ಕಿಂತ ಸನ್ನಿಗ್ದ್ನ ಪರಿಸ್ಥಿತಿ ಇದಾಗಿದೆ.
ಹೈಕಮಾಂಡ್ ಅಧಿಕಾರವೇ ಅಂತಿಮ ತೀರ್ಮಾನವಾಗಿದ್ದು ಸ್ಥಾನ ಹಂಚಿಕೆ ವಿಚಾರದಲ್ಲಿ ಸಿದ್ದರಾಮಯ್ಯಬಣದಲ್ಲಿರುವ 10 ಶಾಸಕರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಣದ 10 ಶಾಸಕರಿಗೆ ಮಂತ್ರಿಗಿರಿ ಸಿಗಲಿರುವುದು ಬಹುತೇಕ ಖಚಿತವಾಗಿದ್ದು. ಉಳಿದ ಸ್ಥಾನಗಳನ್ನು ಯಾರಿಗೆ ನೀಡಬೇಕು? ಎನ್ನುವ ಪ್ರಶ್ನೆಗೆ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳಲಿದೆ.
ಇನ್ನೂ ಬೆಂಗಳೂರು ನಗರವನ್ನು ಹೊರತುಪಡಿಸಿದರೆ ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಬೆಳಗಾವಿಯಾಗಿದೆ. ಜಿಲ್ಲೆಯ 18 ಕ್ಷೇತ್ರಗ ಪೈಕಿ 11ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಸಂಪುಟದಲ್ಲಿ ಜಿಲ್ಲೆಗೆ ಹೆಚ್ಚಿನ ಆದ್ಯತೆ ಸಿಗುವ ನಿರೀಕ್ಷೆಯೂ ಇದ್ದೂ. ಲಕ್ಷ್ಮೀ ಹೆಬ್ಬಾಳ್ಕರ್ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಲಿಂಗಾಯತ ಮತ್ತು ಮಹಿಳಾ ಕೋಟಾದಲ್ಲಿ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎನ್ನಲಾಗಿದೆ. 2023 ಈ ಬಾರಿಯ ಚುನಾವಣೆಯಲ್ಲಿಯೂ ಅವರು 56,016 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಸಚಿವ ಸ್ಥಾನ ಸಿಗಲಿದೆ ಎಂಬುದು ಲೆಕ್ಕಾಚಾರಕ್ಕೆ ತೆಗೆದುಕೊಳ್ಳಲಾಗಿದೆ.
ಅಥಣಿಯ ಶಾಸಕ ಲಕ್ಷ್ಮಣ ಸವದಿ 2018ರ ಚುನಾವಣೆಯಲ್ಲಿ ಸೋತ ಬಳಿಕ ಸಚಿವರಾಗಿದ್ದರು. ವಿಧಾನ ಪರಿಷತ್ ಸದಸ್ಯರಾಗಿದ್ದರು. ಉಪಮುಖ್ಯಮಂತ್ರಿಯೂ ಆಗಿದ್ದರು. ಈ ಬಾರಿ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ನಾಯಕರಿಗೆ ತಮ್ಮ ಬಲ ಏನು? ಎಂದು ಅವರು ತೋರಿಸಿದ್ದಾರೆ.