ವಿಜಯಪುರ: ಯುವಕನೋರ್ವ ‘ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಮ್ ರಾಷ್ಟ್ರ’ ಎಂದು ಸಾಮಾಜಿಕ ಮಾಧ್ಯಮವಾದ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. 2023 ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕವೇ ಈ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾ ಈತ ತನ್ನ ಇನ್ಸಸ್ಟಾಗ್ರಾಂ ಖಾತೆಯಲ್ಲಿ ಪಾಕಿಸ್ತಾನ ಪರ ಸ್ಟೇಟಸ್ ಹಾಕಿದ್ದ.
ಸೊಷಿಯಲ್ ಮೀಡಿಯಾದಲ್ಲಿ ಇದನ್ನು ವೀಕ್ಷಿಸಿದ ಸ್ಥಳಿಯರು ಹಾಗೂ ಈತನ ಖಾತೆಯ ಫಾಲೋವರ್ಸ್ ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡ ತಾಳಿಕೋಟೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಸದ್ಯ ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ.