ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister), 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ದೆಹಲಿಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುಮಾರು 5 ಗಂಟೆಗಳ ಚರ್ಚೆ ನಡೆಸಿ ಸಿಎಂ ಡಿಸಿಎಂ ಸೇರಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಸಚಿವರ ಪಟ್ಟಿ ಇಲ್ಲಿದೆ
- ಡಾ.ಜಿ.ಪರಮೇಶ್ವರ್
- ಕೆ.ಹೆಚ್. ಮುನಿಯಪ್ಪ
- ಕೆ.ಜೆ. ಜಾರ್ಜ್
- ಎಂ.ಬಿ.ಪಾಟೀಲ್
- ಸತೀಶ್ ಜಾರಕಿಹೊಳಿ
- ಪ್ರಿಯಾಂಕ್ ಖರ್ಗೆ
- ರಾಮಲಿಂಗ ರೆಡ್ಡಿ
- ಜಮೀರ್ ಅಹ್ಮದ್ ಖಾನ್