ಬೆಂಗಳೂರು: ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ ಕೆ.ಸುಧಾಕರ್ (K Sudhakar) ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದು H. ವಿಶ್ವನಾಥ್ ಹೇಳಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ ಎಂಬ ಮಾಜಿ ಸಚಿವ ಸುಧಾಕರ್ ಆರೋಪಕ್ಕೆ ಅವರು ತಿರುಗೇಟು ನೀಡಿದರು. ನಾನು ಬಿಜೆಪಿ, ಕಾಂಗ್ರೆಸ್ ಅಂತಲ್ಲ ಜನರ ಮಧ್ಯೆ ಇರೋನು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸುತ್ತಾರೆ. ನಾನು ಕೂಡ ಈ ಸರ್ಕಾರಕ್ಕೆ ಸಲಹೆ ನೀಡುತ್ತೇನೆ.
ಬಿಜೆಪಿ ಮಾಡಿದ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು. ಸುಧಾಕರ್ ಆರೋಪ ಸತ್ಯಕ್ಕೆ ದೂರವಾದದ್ದು. ಚುನಾವಣೆ ಸಂದರ್ಭದಲ್ಲಿ ಹೇಳಿದ್ದರೆ ಗೌರವ ಇರುತ್ತಿತ್ತು. ಈಗ ಏನೋ ಸತ್ಯ ಹೇಳುತ್ತಿದ್ದೇನೆ ಅಂತಾ ಪೋಸು ಕೊಡ್ತಿದ್ದಾರೆ. ಸೋತು ಸುಣ್ಣ ಆದ ಮೇಲೆ ಈ ರೀತಿ ಹೇಳುತ್ತಿರುವುದು ನಗೆ ಪಾಟಲು. ಮಾಜಿ ಸಚಿವ ಸುಧಾಕರ್ ಜೊತೆ ಬಿಜೆಪಿ ಸರ್ವನಾಶದತ್ತ ಬಂದಿದೆ. ಡಾ.ಕೆ.ಸುಧಾಕರ್ರನ್ನು ದುಡ್ಡು ಇಲ್ಲದ ಯುವಕ ಸೋಲಿಸಿದ್ದಾನೆ ಎಂದು ಕಿಡಿಕಾರಿದ್ದಾರೆ.
ಸುಧಾಕರ್ ಆರೋಪವೇನು?
JDS-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಮ್ಮ ಸಮಸ್ಯೆ ಬಗ್ಗೆ, ನಮಗೆ ಆಗುತ್ತಿದ್ದ ಅನ್ಯಾಯಗಳ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಾಡುತ್ತಿದ್ದೆವು. ಸಿದ್ದರಾಮಯ್ಯ ಆಗ ಈ ಸರ್ಕಾರದಲ್ಲಿ ನನ್ನ ಮಾತು ನಡೆಯುತ್ತಿಲ್ಲ. ನನ್ನ ಕ್ಷೇತ್ರ, ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭಾ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಇರಲ್ಲ.