ಬೆಂಗಳೂರು: ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಅಜ್ಜಯನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ, 6 ಮಂದಿ ಸಚಿವರಾಗಿ ಇಬ್ಬರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಿಎಂ, ಡಿಸಿಎಂ ಪ್ರಮಾಣವಚನದ ಬಳಿಕ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಡಾ.ಜಿ ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಬಳಿಕ ಕೆಹೆಚ್ ಮುನಿಯಪ್ಪ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಆ ನಂತರ ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ರೆ, ಶಾಸಕ ಎಂ.ಬಿ ಪಾಟೀಲ್ ಅವರು ಕೂಡ ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಶಾಸಕ ಸತೀಶ್ ಜಾರಕಿಹೊಳಿ ಅವರು ಸಂಪುಟ ದರ್ಜೆಯ ಸಚಿವರಾಗಿ ಬುದ್ಧ ಬಸವನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಶಾಸಕ ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಜಯನಗರ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿ, ಬಿಟಿಎಂ ಲೇಔಟ್ ಕ್ಷೇತ್ರದಿಂದ ನಾಲ್ಕುಬಾರಿಯಾಗಿ ಶಾಸಕರಾಗಿ ಆಯ್ಕೆಯಾಗಿದ್ದಂತ ರಾಮಲಿಂಗಾರೆಡ್ಡಿಯವರು ಇಂದು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಬಳಿಕ ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾ ಹಾಗೂ ತಾಯಿಯ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂಗ್ಲಿಷ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.