ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಹೆಚ್ ಡಿಕೆ, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ.
ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ.
ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ಇನ್ನೂ ಇಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇಂತಹ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ.