ನವದೆಹಲಿ: ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಹಿರೋಷಿಮಾದಲ್ಲಿ ಬ್ರೆಜಿಲ್ ಅಧ್ಯಕ್ಷ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಭೇಟಿ ಮಾಡಿದರು. ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ, ವಿಶೇಷವಾಗಿ ರಕ್ಷಣಾ ಉತ್ಪಾದನೆ, ವ್ಯಾಪಾರ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳ ಕುರಿತು ಚರ್ಚಿಸಿದರು.
“ಅಧ್ಯಕ್ಷ ಲೂಲಾ ಅವರೊಂದಿಗಿನ ಮಾತುಕತೆ ಸಕಾರಾತ್ಮಕವಾಗಿದ್ದು, ವ್ಯಾಪಾರ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ಭಾರತ ಮತ್ತು ಬ್ರೆಜಿಲ್ ಒಟ್ಟಾಗಿ ಕೆಲಸ ಮಾಡುತ್ತವೆ. ನಾವು ಕೃಷಿ, ರಕ್ಷಣೆ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಲು ಬಯಸಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರೋಷಿಮಾದಲ್ಲಿ ಬ್ರೆಜಿಲ್ ಅಧ್ಯಕ್ಷ ಲುಲಾ ಅವರನ್ನು ಭೇಟಿ ಮಾಡಿದ್ದು. ಭಾರತ-ಬ್ರೆಜಿಲ್ ರಕ್ಷಣಾ ಉತ್ಪಾದನೆ, ವ್ಯಾಪಾರದ ಕ್ಷೇತ್ರ. ಫಾರ್ಮಾಸ್ಯುಟಿಕಲ್ಸ್, ಕೃಷಿ, ಡೈರಿ ಮತ್ತು ಪಶುಸಂಗೋಪನೆ ಮತ್ತು ನವೀಕರಿಸಬಹುದಾದ ಶಕ್ತಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.