ಬೆಂಗಳೂರು: 8 ಜನರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಇನ್ನುಳಿದ ಶಾಸಕರು ಒಳಗೊಳಗೆ ಲಾಭಿ ನಡೆಸುತ್ತಿದ್ದು ಮನಸ್ಥಾಪಗಳು ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ನಮ್ಮ ವಿಚಾರಗಳ ಬಗ್ಗೆ ನಾವು ಕೂಡ ಹೇಳಿದ್ದೇವೆ. ಅಂತಿಮವಾಗಿ ಅವ್ರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದು ಬೆಂಗಳೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ಖಾತೆ ಹಂಚಿಕೆ ಸಂಬಂಧ ಪ್ರತಿಕ್ರಿಯೆ ನೀಡಿದರು.
5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವೇಣುಗೋಪಾಲ್ ಏನು ಹೇಳಿದ್ದಾರೋ ಅದನ್ನೇ ನಾನು ಹೇಳಿದ್ದೆ. ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ನನಗೆ ಗೊತ್ತಿಲ್ಲ. ಪವರ್ ಶೇರಿಂಗ್ ಇದ್ದರೆ ಜನರ ಜತೆ ಮಾತ್ರ ಅಂತಾ ಹೇಳಿದ್ದಾರೆ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದಿದ್ದರು ಎಂದು ಬೆಂಗಳೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.