ಬೆಂಗಳೂರು: ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರುವಾಗಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಗೆ ಸಾರಿಗೆ ಇಲಾಖೆ ಸಿದ್ಧತೆ ನಡೆಸುತ್ತಿದೆ. ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಕಲ್ಪಿಸಲು ಸರ್ಕಾರ ಸಿದ್ದತೆ ನಡೆಸಿದ್ದು, ಫ್ರೀ ಬಸ್ ಭಾಗ್ಯಕ್ಕೆ ಕಂಡೀಷನ್ ಹಾಕಿಯೇ ಫ್ರೀ ಬಸ್ ಸೇವೆ ನೀಡಲು ಪ್ಲಾನ್ ಮಾಡಿದೆ.
ಶೀಘ್ರದಲ್ಲೇ ಷರತ್ತು ಮತ್ತು ನಿರ್ಬಂಧ ಗಳಿಗ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಆಗಲಿದ್ದು, ಒಂದೆರಡು ದಿನದಲ್ಲಿ ಫ್ರೀ ಬಸ್ ಸ್ಕೀಂ ಮಾರ್ಗಸೂಚಿಯು, ಸರ್ಕಾರದ ಕೈ ಸೇರಲಿದೆ. ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಮಾರ್ಗಸೂಚಿಯ ರೆಡಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದು, ಈ ಯೋಜನೆಯ ಫಲಾನುಭವಿಗಳು, ಐಷಾರಾಮಿ ಬಸ್ ಗಳಲ್ಲಿ ಫ್ರೀ ಓಡಾಟ ಮಾಡುವಂತಿಲ್ಲ. ಸರ್ಕಾರಿ ಬಸ್ ನಲ್ಲಿ ಓಡಾಟ ನಡೆಸುವ ಮಹಿಳೆಯರಿಗೆ ಪ್ರತ್ಯೇಕ ಪಾಸ್ ನೀಡಲಾಗುತ್ತದೆ.
ಇನ್ನೂ ಉಚಿತ ಪ್ರಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಉಚಿತ ವೆಚ್ಚದ ಬಸ್ ಸೇವೆಯನ್ನು ರಾಜ್ಯದ ಗಡಿಯೊಳಗೆ ಓಡಾಟಕ್ಕೆ ಅನುಮತಿ ನೀಡಲಾಗುತ್ತದೆ. ಉಚಿತ ಬಸ್ ಬಳಸಲು ಮಹಿಳಾ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಕಡ್ಡಾಯವಾಗಿ ತರುವಂತದ್ದು, ಎಲ್ಲಾ ಪ್ರೀಮಿಯಂ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.
ಇನ್ನೂ ದೆಹಲಿ ಮಾದರಿಯಲ್ಲೇ ಫ್ರೀ ಬಸ್ ಸೇವೆ ನೀಡಲು ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ. ಇನ್ನೂ ಈ ಯೋಜನೆಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ತಗುಲುವ ಹೊರೆಯನ್ನು ಸರ್ಕಾರ ಭರಿಸಲು ನಿರ್ಧಾರ ಮಾಡಿದೆ. ಸಾರಿಗೆ ನಿಗಮಗಳು ದಿವಾಳಿಯಾಗದಂತೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.