ರಾಜ್ಯದಲ್ಲಿ ಇನ್ನೂ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ.
ದೇವರ ಚಿಕ್ಕನಹಳ್ಳಿಯಲ್ಲಿ ಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಚರಂಡಿಯಲ್ಲಿ ಹರಿದು ಹೋಗುತ್ತಿದ್ದ ನೀರು ಮನೆಗೆ ಬಂದಿದೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳೆಲ್ಲವೂ ಮುಳುಗಿ ಹೋಗಿದೆ. ಸಮಸ್ಯೆಯಾದರೂ ಬಿಬಿಎಂಪಿ ಅಧಿಕಾರಿಗಳು ಬಂದಿಲ್ಲವೆಂದು ಆಕ್ರೋಶ ಹೊರ ಹಾಕಿದರು.
ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 24ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಕರಾವಳಿ, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಸೂಚನೆಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ.ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶವು 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ