ಬಾಲಿವುಡ್ ನ ಖ್ಯಾತ ನಟ ಅನುಪಮ್ ಖೇರ್ ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅನುಪಮ್ ‘ವಿಜಯ್ 69’ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದು ವೇಳೆ ಭುಜಕ್ಕೆ ಗಾಯಮಾಡಿಕೊಂಡಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಅನುಪಮ್ ಖೇರ್, ನಾನು ಆರೋಗ್ಯವಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಆತಂಕದಲ್ಲಿರುವ ಅಭಿಮಾನಿಗಳಿಗೆ ಅನುಪಮ್ ಖೇರ್ ಸ್ಪಷ್ಟನೆ ನೀಡಿದ್ದಾರೆ. ಸ್ಪೋರ್ಟ್ಸ್ ಸಿನಿಮಾ ಮಾಡುತ್ತೀರಿ ಮತ್ತು ನೀವು ಗಾಯಗೊಂಡಿಲ್ಲ ಅಂದರೆ ಅದು ಹೇಗೆ ಸಾಧ್ಯ ‘ವಿಜಯ್ 69’ರ ಶೂಟಿಂಗ್ ಸಮಯದಲ್ಲಿ ಭುಜಕ್ಕೆ ತೀವ್ರವಾಗಿ ಗಾಯವಾಯಿತು’ ಎಂದು ಅವರು ಬರೆದುಕೊಂಡಿದ್ದಾರೆ. ಸದ್ಯ ಅವರು ಗಾಯಗೊಂಡಿರುವುದರಿಂದ ಶೂಟಿಂಗ್ಗೆ ಬ್ರೇಕ್ ಪಡೆದಿದ್ದಾರೆ. ನೆಚ್ಚಿನ ನಟ ಶ್ರೀಘ್ರವೇ ಗುಣಮುಖರಾಗಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ಯಶ್ ರಾಜ್ ಫಿಲ್ಮ್ಸ್ ಸಂಸ್ಥೆಯ ‘ವೈಆರ್ಎಫ್ ಎಂಟರ್ಟೈನ್ಮೆಂಟ್’ ಒಟಿಟಿ ಮೂಲಕ ವಿಜಯ್ 69 ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ನೇರವಾಗಿ ಒಟಿಟಿ ಮೂಲಕ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅಕ್ಷಯ್ ರಾಯ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.