ಮಂಗಳೂರು: ಡಿಕೆಶಿ ಪೊಲೀಸರಿಗೆ ನಿನ್ನೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.. ಮಂಗಳೂರಿನಲ್ಲಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (kota srinivas poojary)ಮಾತನಾಡಿದ್ದು,
ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನ ಪುನರ್ ಪರಿಶೀಲನೆ ಮಾಡಬೇಕು ಎಂದರು.