ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ (Lakshmana Savadi)ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಿಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು,
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ.