ಬೆಂಗಳೂರು: ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ.
ಇಂದು (ಮೇ.27) ಬೆಳಗ್ಗೆ 11.45ಕ್ಕೆ ರಾಜಭವನದ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಅಥವಾ ನಾಳೆ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.