ಬೆಂಗಳೂರು: ಸಿಇಟಿ-2023ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ತನ್ನ ವೆಬ್ಸೈಟ್ http://kea.kar.nic.in ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶನಿವಾರ ತಿಳಿಸಿದೆ.
ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕೊಡಲಾಗಿದೆ. ಪ್ರಾಧಿಕಾರದ ಆನ್ಲೈನ್ ಪೋರ್ಟಲ್ ಮೂಲಕ ಮಾತ್ರವೇ ದಿನಾಂಕ 26-05-2023ರ ಬೆಳಿಗ್ಗೆ 11:00ರಿಂದ ದಿನಾಂಕ 30-05-2023 ಬೆಳಿಗ್ಗೆ 11:00 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆಗಳ ವಿವರಗಳೊಂದಿಗೆ ಹಾಗೂ ಸಮರ್ಥನೆಯನ್ನು (ಜಸ್ಟಿಫಿಕೇಷನ್) ಅನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಸಮರ್ಥನೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಉತ್ತರಗಳು ಅಂತಿಮ ಎಂದು ತಿಳಿಸಲಾಗಿದೆ.