ಸಂಸಾರ, ಸಿನಿಮಾ, ಮಗಳು ಎಂದು ಬ್ಯುಸಿಯಾಗಿರುವ ನಟಿ ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಅನುಷ್ಕಾ, ಹೆಚ್ಚೆಚ್ಚು ಸಿನಿಮಾಗಳಲ್ಲಿ ನಟಿಸಲು ಇಷ್ಟವಿದಿಲ್ಲ ಎಂದಿದ್ದಾರೆ.
ಮಗುವಾದ ನಂತರ ಅನುಷ್ಕಾ ಬಹುತೇಕ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಟ್ಟಿದ್ದಾರೆ. ಜೊತೆಗೆ ಪತಿ ವಿರಾಟ್ ಕೊಹ್ಲಿ ಜೊತೆ ಸಾಕಷ್ಟು ಪ್ರವಾಸವನ್ನು ಮಾಡಿದ್ದಾರೆ. ಮಗುವಿನೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಹಾಗಾಗಿ ಸಿನಿಮಾ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಮುಂದಿನ ದಿನಗಳಲ್ಲೂ ತಾವು ಹೀಗೆಯೇ ಇರುವುದಾಗಿ ಹೇಳಿದ್ದಾರೆ.
ನನಗೆ ಒಪ್ಪುವಂತಹ ಮತ್ತು ಪಾತ್ರವನ್ನು ನಾನೇ ಮಾಡಬೇಕು ಅನ್ನುವಂತಹ ಚಿತ್ರಗಳನ್ನು ಮಾತ್ರ ಒಪ್ಪಿಕೊಳ್ಳುತ್ತೇನೆ. ವರ್ಷಕ್ಕೆ ಒಂದೇ ಸಿನಿಮಾ ಮಾಡಿದರೂ ಪರವಾಗಿಲ್ಲ. ಒಪ್ಪಿಕೊಂಡ ಪಾತ್ರಗಳು ಅಭಿಮಾನಿಗಳಿಗೆ ಹಿಡಿಸಬೇಕು. ನಟಿಸಲು ನನಗೇನೂ ಅವಸರವಿಲ್ಲ ಎಂದು ಅನುಷ್ಕಾ ಹೇಳಿದ್ದಾರೆ.
ಅತಿ ಕಡಿಮೆ ಸಮಯದಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡಿರುವ ಅನುಷ್ಕಾ, ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದು ಇದೀಗ ಚಿತ್ರ ರಂಗದಿಂದ ಕ್ರಮೇಣ ದೂರವಾಗುವ ಕುರಿತು ಮಾತನಾಡಿ ಅಭಿಮಾನಿಗಳಿಗೆ ಬೇಸರ ಮೂಡಿಸಿದ್ದಾರೆ.