ನವದೆಹಲಿ: ನೂತನ ಸಂಸತ್ ಭವನ (New Parliament Building) ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಟ್ಟಾಭಿಷೇಕದಂತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸಂಸತ್ ಜನರ ಧ್ವನಿ. ಸಂಸತ್ ಭವನದ ಉದ್ಘಾಟನೆಯನ್ನು ಪ್ರಧಾನಿ ಮಹಾಮಸ್ತಕಾಭಿಷೇಕ ಎಂದು ಪರಿಗಣಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
संसद लोगों की आवाज़ है!
प्रधानमंत्री संसद भवन के उद्घाटन को राज्याभिषेक समझ रहे हैं।
— Rahul Gandhi (@RahulGandhi) May 28, 2023
ಹೊಸ ಸಂಸತ್ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದ ಕುಸ್ತಿಪಟುಗಳ ಬಂಧನ ಖಂಡಿಸಿ ಟ್ವೀಟ್ ಮಾಡಿರುವ ಅವರು, ಪಟ್ಟಾಭಿಷೇಕ ಮುಗಿಯಿತು. ಬೀದಿಗಿಳಿದು ಸಾರ್ವಜನಿಕರ ದನಿಯನ್ನು ತುಳಿಯುತ್ತಿರುವ ‘ಅಹಂಕಾರಿ ರಾಜ’ ಎಂದು ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವಿರೋಧ ಪಕ್ಷಗಳ ಬಹಿಷ್ಕಾರದ ಕರೆ ನಡುವೆ ಭಾನುವಾರ ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಂಸತ್ ಭವನದಲ್ಲಿ ಪೂಜೆ, ಹೋಮ-ಹವನ ಸೇರಿದಂತೆ ಕಾರ್ಯಕ್ರಮ ನಡೆಯಿತು.