ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಹಿಜಾಬ್ ವಿಚಾರವಾಗಿ ಕೆಲವೊಂದು ಕಾನೂನು ತೊಡಕುಗಳಿವೆ. ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಳ್ಳುತ್ತೇವೆ.
ಶಾಲೆಗಳು ಪ್ರಾರಂಭ ಹಿನ್ನೆಲೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಶಿವಮೊಗ್ಗ ಗ್ರಾಮಾಂತರ ಶಾಲೆಗೆ ಭೇಟಿ ನೀಡುತ್ತಿದ್ದೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.