ಹುಬ್ಬಳ್ಳಿ: ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಸ್ಥಾನ ಸಿಗದ ಹಿನ್ನೆಲೆ ಬೇಸರಗೊಂಡಿದ್ದ ಅಭಿಮಾನಿಗಳು ಶೆಟ್ಟರ್ ಭೇಟಿಯಾಗಿ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡುವ ಭರವಸೆ ಕೊಡಲಿರುವ ಡಿಕೆಶಿ ಲೋಕಸಭಾ ಚುನಾವಣೆಗೆ ಸಹ ತಯಾರಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಹಾಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ಶೆಟ್ಟರ್ ಕಣಕ್ಕೆ ಇಳಿಸಲು ಚಿಂತನೆ ನಡೆದಿದ್ದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಶೆಡ್ಡು ಹೊಡಿಸಲು ಪಕ್ಷದ ಚಿಂತನೆ ಎಲ್ಲ ವಿಚಾರಗಳ ಕುರಿತು ಚರ್ಚೆ ನಡೆಸಲಿರುವ ಉಭಯ ನಾಯಕರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು ಈಗಾಗಲೇ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳು ಪ್ರಮಾಣವಚನ ಸ್ವೀಕರಿಸಿದ್ದು, ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದ ಗ್ಯಾರಂಟಿಗಳ ಜಾರಿಗೆ ಸಿದ್ಧತೆ ನಡೆದಿದೆ.
ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿ ಕೊಡಬೇಕೆಂಬ ಮಾತು ಕೇಳಿ ಬರುತ್ತಿದ್ದು, ಇದರ ಮಧ್ಯೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಭಯ ನಾಯಕರುಗಳ ನಿವಾಸಕ್ಕೆ ಭೇಟಿ ನೀಡಿರುವುದು ಕುತೂಹಲ ಕೆರಳಿಸಿದೆ.