ಬೆಂಗಳೂರು: ಮಳೆಯಿಂದಾಗಿ ಎದುರಾಗುವ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು,ಎಲ್ಲಾ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಇಂಜಿನಿಯರ್ಗಳು, ಕಾರ್ಯನಿರ್ವಾಹಕ ಇಂಜಿನಿಯರ್ಗಳು ಮತ್ತು ಅರಣ್ಯ ವಿಭಾಗದ ಅಧಿಕಾರಿಗಳು ಕ್ಷೇತ್ರದಲ್ಲಿ ಹೆಚ್ಚಿನ ಜಾಗರೂಕರಾಗಿರುವಂತೆ ಮತ್ತು ನಿರಂತರವಾಗಿ ಮಳೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ನಿರ್ದೇಶಿಸಲಾಗಿದೆ.
ಯಂತ್ರೋಪಕರಣಗಳನ್ನು ಸಿದ್ಧವಾಗಿರುವಂತೆ, ಯಾವುದೇ ಸಮಯದಲ್ಲಿ ಯಾವುದೇ ರೀತಿಯ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಗಳ ಆದೇಶದಂತೆ ನಿಯಂತ್ರಣ ಕೊಠಡಿಗಳು ವಲಯದಿಂದ ಉಪ-ವಿಭಾಗ ಮಟ್ಟದವರೆಗೆ 2*7 ಕಾರ್ಯನಿರ್ವಹಿಸುತ್ತಿವೆ.
ಅಗತ್ಯ ಉಪಕರಣಗಳು, ವಾಹನಗಳು ಮತ್ತು ಇತರ ಸಾಮಗ್ರಿಗಳು ಸನ್ನದ್ಧ ಸ್ಥಿತಿಯಲ್ಲಿರಸಲಾಗುತ್ತಿದೆ. ಯಾವುದೇ ಸಿಬ್ಬಂದಿ ಅಸಡ್ಡೆ, ಆಲಸ್ಯ ಅಥವಾ ಬೇಜವಾಬ್ದಾರಿ ವರ್ತನೆ ತೋರಿದ್ದೇ ಆದರೆ, ಅಮಾನತು ಸೇರಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಚ್ಚರಿಕೆ ನೀಡಿದರು.