ಬೆಂಗಳೂರು: ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಸರ್ಕಾರಕ್ಕೆ ಮಾಜಿ ಸಚಿವ ಗೋವಿಂದ ಕಾರಜೋಳ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್ನವರು, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಹಾಗೂ ಈಗಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ನಾಡಿನ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟಿದ್ದರು.
ಅಲ್ಲದೆ, ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷವು ಮೋಸ, ವಂಚನೆ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಯಾವ ಮಟ್ಟಕ್ಕಾದರೂ ಹೋಗುವುದನ್ನು ಸ್ವಾತಂತ್ರ್ಯಾನಂತರದ 60 ವರ್ಷಗಳಲ್ಲಿ ಮಾಡುತ್ತಲೇ ಬಂದಿದೆ.
ಮೊದಲ 60 ವರ್ಷಗಳಲ್ಲಿ ಜಾತಿ, ಜಾತಿ, ಧರ್ಮ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ಆಡಳಿತ ಮಾಡಿದ್ದರು ಎಂದು ಕಿಡಿಕಾರಿದರು.