ಬೆಂಗಳೂರು: ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು.
ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.