ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಅಂತ್ಯವಾಗಿದ್ದು ಅವರ ಮನೆಗಳಲ್ಲಿ ಸಿಕ್ಕಿದ್ದನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಯಾರ ಮನೆಯಲ್ಲಿ ಎಷ್ಟೇಷ್ಟೆ ಸಿಕ್ತು ಎಂಬುದ ಫುಲ್ ಡಿಟೇಲ್ಸ್ ಇಲ್ಲಿದೆ.
ಭ್ರಷ್ಟ ಅಧಿಕಾರಿಗಳ ಮೇಲೆ ಬುಧವಾರ ನಡೆದ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಜೆ ರಮೇಶ್ರ ಬಸವೇಶ್ವರನಗರದ ಮನೆ ಸೇರಿ ನಾಲ್ಕು ಕಡೆ ದಾಳಿ ನಡೆಸಿದರು. ಮನೆಯಲ್ಲಿ 1.4 ಕೋಟಿ ಮೌಲ್ಯದ ದ್ವಿಚಕ್ರ ವಾಹನ, ಕಾರು, ಗೃಹೋಪಯೋಗಿ ಉಪಕರಣಗಳು, ವಿಸ್ಕಿ ಪತ್ತೆಯಾಗಿದೆ. ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆಯ ಟಿವಿ ನಾರಾಯಣಪ್ಪರ ವಿಜಯನಗರದ ಮನೆ ಸೇರಿ 10 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ದಾಳಿ ವೇಳೆ 22.50 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳು, ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿದ್ರೆ, ಇನ್ನು ಬೆಸ್ಕಾಂನ ಟೆಕ್ನಿಕಲ್ ಚೀಫ್ ಇಂಜಿನಿಯರ್ ಹೆಚ್.ಜೆ ರಮೇಶ್ರ ಬಸವೇಶ್ವರನಗರದ ಮನೆ ಸೇರಿ ನಾಲ್ಕು ಕಡೆ ದಾಳಿ ನಡೆಸಿ ಅಧಿಕಾರಿಗಳು, ಮನೆಯಲ್ಲಿ 1.4 ಕೋಟಿ ಮೌಲ್ಯದ ದ್ವಿಚಕ್ರ ವಾಹನ, ಕಾರು, ಗೃಹೋಪಯೋಗಿ ಉಪಕರಣಗಳು, ವಿಸ್ಕಿ ಪತ್ತೆಯಾಗಿದೆ. 4.20 ಕೋಟಿ ಮೌಲ್ಯದ ಏರೋಸ್ಪೇಸ್ ಪಾರ್ಕ್, ಪ್ಲಾಟ್ ಸೇರಿದಂತೆ 5.60 ಕೋಟಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.
ಬೆಂಗಳೂರು, ತುಮಕೂರು, ದಕ್ಷಿಣ ಕನ್ನಡ, ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ
ಎಲ್ಲೆಲ್ಲಿ, ಯಾರ ನಿವಾಸ ಮೇಲೆ ದಾಳಿ?: ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.
ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ: ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾಂ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಕಾರ್ಯಾಚರಣೆ: ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದೆ.
ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೆ ದಾಳಿ: ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.