ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ 2023-24ರ ಶೈಕ್ಷಣಿಕ ವರ್ಷ ಪ್ರಾರಂಭವನ್ನು ಹಬ್ಬದ ರೀತಿಯಲ್ಲಿ ಸಡಗರದಿಂದ ಆ ಯೋಜನೆ ಮಾಡಿದ ಶಾಸಕರು ಸರ್ಕಾರಿ ಶಾಲೆಯ ಮಕ್ಕಳಿಗೆ ಜ್ಞಾನದ ಅರಿವು ಮೂಡಿಸುವ ರೀತಿಯಲ್ಲಿ ವಿಭಿನ್ನ ರೀತಿ ವಿನ್ಯಾಸಗೊಳಿಸಿ ಸಾಂಪ್ರದಾಯಿಕ ರೀತಿಯಲ್ಲಿ ಮಕ್ಕಳ ಮೇಲೆ ಪುಷ್ಪವೃಷ್ಟಿ ಹೂಗುಚ್ಚ,ಪಠ್ಯಪುಸ್ತಕ ಕೊಟ್ಟು ಸಿಹಿ ತಿನಿಸುವ ಮೂಲಕ ಮಕ್ಕಳನ್ನು ಆಕರ್ಷಿಸುವ ರೀತಿಯಲ್ಲಿ ಶಾಲೆಗೆ ಬರಮಾಡಿಕೊಂಡಿದ್ದು ವಿಶೇಷ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಮಾದರಿಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭ ಹೇಗಿತ್ತು ಎನ್ನುವುದರ ಸ್ಟೋರಿ ಇಲ್ಲಿದೆ ನೋಡಿ.
ಹೌದು ವಿಭಿನ್ನ ಅತ್ಯಾಧುನಿಕ ರೀತಿಯಲ್ಲಿ ಖಾಸಗಿ ಶಾಲೆಗಳು ಮಕ್ಕಳನ್ನು ಹಾಗೂ ಪೋಷಕರನ್ನು ತಮ್ಮದೇ ಆದ ಶೈಲಿಯಲ್ಲಿ ಸ್ಪರ್ಧಾತ್ಮಕವಾಗಿ ಆಕರ್ಷಣೆಗೆ ಮುಂದಾಗಿರುವ ಸಂದರ್ಭದಲ್ಲಿ ಅವರಿಗಿಂತ ನಾವೇನು ಕಮ್ಮಿ ಇಲ್ಲ ಎನ್ನುವ ರೀತಿಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ವೈಯಕ್ತಿಕ ಖರ್ಚಿನಿಂದ ಶಾಲೆಯ ಗೋಡೆಗಳ ಮೇಲೆ ಮಕ್ಕಳಿಗೆ ಅರಿವು ಮೂಡಿಸುವ ಮಾದರಿಯಲ್ಲಿ ಶೈಕ್ಷಣಿಕ ಮಾಹಿತಿಯ ಚಿತ್ರಕಲೆಗಳನ್ನು ಬಿಡಿಸುವ ಮೂಲಕ ಮಕ್ಕಳನ್ನು ಹಾಗೂ ಪೋಷಕರನ್ನು ಆಕರ್ಷಿಸಲು ಮುಂದಾಗಿದ್ದಾರೆ ಶಾಲೆಯ ಪ್ರಾರಂಭದ ಮೊದಲನೇ ದಿನವಾದ ಎಂದು ನಟ ಡಾಲಿ ಧನಂಜಯ್ ಹಾಗೂ
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ರವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚೆಲುವರಸನಕೊಪ್ಪಲು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಹೂ ಮಳೆ ಸೊರಿಸಿ ಸಿಹಿ ಕೊಡುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು. ಇನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಬಿ ಹೊಸೂರು ಕಾಲೋನಿಯ ಸರ್ಕಾರಿ ಶಾಲೆಗೆ ಶಾಸಕ ಪಿ ರವಿಕುಮಾರ್ ಗೌಡ ಗಣಿಗ ರವರು ಎತ್ತಿನ ಗಾಡಿ ಮೂಲಕ ಆಗಮಿಸಿ ಮಕ್ಕಳ ಗಮನ ಸೆಳೆದರು ಮಕ್ಕಳಿಗೆ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ನೀಡುವ ಮೂಲಕ ಸಿಹಿ ಹಂಚಿ ಬರಮಾಡಿಕೊಂಡರು ಶಾಲಾ ಕೊಟ್ಟಡಿಗಳನ್ನು ವೀಕ್ಷಣೆ ಮಾಡಿದ ನಂತರ ಗ್ರಾಮ ದೇವತೆಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.