ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ (Manipur violence) ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್ ಶಾ ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು. ಮಣಿಪುರದಲ್ಲಿ ಕುಕಿ ಮತ್ತು ಮೇಟಿ ಸಮುದಾಯದ ನಡುವಿನ ಸಂಘರ್ಷಕ್ಕೆ ಕಾರಣವಾದ ಆತುರದ ನಿರ್ಧಾರದಿಂದ ಮೀಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಸ್ಥಾನಮಾನವನ್ನು ನೀಡಲು ರಾಜ್ಯ ಸರ್ಕಾರವನ್ನು ಶಿಫಾರಸು ಮಾಡುವಂತೆ ಕೇಳಿದೆ.
ಕುಕಿಗಳು ಮತ್ತು ಮೇಟಿಗಳೆರಡೂ ನೆಲೆಸಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಕುಕಿಗಳು ಮತ್ತು ಮೇಟಿ ಸುರಕ್ಷಿತವಾಗಿ ಮನೆಗೆ ಮರುಳುವಂತೆ ಮಾಡುವುದು ನಮ್ಮ ಕರ್ತವ್ಯ , ಆ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು. ಅವರು ಕಾಂಗ್ಪೊಕ್ಪಿ ಮತ್ತು ಮೊರೆಯಲ್ಲಿ ಕುಕಿ ಸಮುದಾಯದ ಮುಖಂಡರು ಮತ್ತು ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.