ಸ್ಯಾನ್ ಫ್ರಾನ್ಸಿಸ್ಕೋ: ನಾನೀಗ ಸಂಸದನಲ್ಲ. ಸಾಮಾನ್ಯ ಮನುಷ್ಯ. ಇದೇ ರೀತಿ ಇರಲು ನನಗೆ ಇಷ್ಟ ಎಂದು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಹೇಳಿದ್ದಾರೆ.
ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಆಗಮಿಸಿರುವ ರಾಹುಲ್ಗಾಂಧಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಮನುಷ್ಯರಂತೆ ಓಡಾಡುತ್ತಿದ್ದರು. ಕೆಲವರು ರಾಹುಲ್ ಅವರೊಂದಿಗೆ ಸೆಲಿ ಕ್ಲಿಕ್ಕಿಸಿಕೊಂಡು ನಿವ್ಯಾಕೆ ಸಾಮಾನ್ಯರಂತೆ ಓಡಾಡುತ್ತಿದ್ದೀರಾ ಎಂದು ಕೇಳಿದಾಗ ಅವರು ಈಗ ನಾನು ಸಂಸದನಲ್ಲ. ಸಾಮಾನ್ಯ ಮನುಷ್ಯ ಅದೇ ರೀತಿ ಇರಲು ನನಗೆ ಖುಷಿಯಾಗಿದೆ ಎಂದು ಹೇಳಿದ್ದಾರೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಐಒಸಿಯ ಇತರ ಸದಸ್ಯರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ವಲಸೆ ಕ್ಲಿಯರೆನ್ಸ್ಗಾಗಿ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಎರಡು ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿರುವ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.