ಬೆಂಗಳೂರು: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು.
ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಜರಾಕ್ಸ್ ನೀಡಬೇಕು.
ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.