ಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಇದೀಗ ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಅಧಿಕ ಜನ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ-ಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.