ಬೆಂಗಳೂರು: ಒಡಿಶಾ ರೈಲು ಅಪಘಾತ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ರೈಲು ಅಪಘಾತ ದುರದೃಷ್ಟಕರ, ಕರ್ನಾಟಕ ಜನರ ದುಃಖ ಜೊತೆಯಲ್ಲಿದೆ. ಅಪಘಾತದ ಕಾರಣ ಹುಡುಕೋದು ಕಷ್ಟ. ಆದರೆ, ಮುಂದೆ ಈ ರೀತಿ ಆಗದ ಹಾಗೇ ನೋಡಿಕೊಳ್ಳಬೇಕು ಅಂದರೆ ಕಾರಣ ಹುಡುಕಬೇಕು ಎಂದಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 280ಕ್ಕೆ ಏರಿಕೆಯಾಗಿದೆ. ಈಗಾಗಲೇ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.