ಬೆಂಗಳೂರು: ಒಡಿಶಾದ ಬಹನಾಗ ನಿಲ್ದಾಣದ ಬಳಿ ಶುಕ್ರವಾರ 3 ರೈಲುಗಳ ನಡುವೆ ಡಿಕ್ಕಿಯಾಗಿದ್ದು, ದುರಂತ ಸ್ಥಳಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ. ಹೌದು ರಾಜ್ಯದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಸಿದ್ದರಾಮಯ್ಯ ಅವರು ಸಂತೋಷ್ ಲಾಡ್ ಅವರನ್ನ ಒಡಿಶಾಗೆ ಕಳುಹಿಸಿದ್ದಾರೆ.
ದುರಂತ ಸ್ಥಳದಲ್ಲಿರುವ ಕನ್ನಡಿಗರು ನನ್ನ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಸಚಿವ ಸಂತೋಷ್ ಲಾಡ್
ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ‘ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರುವುದು ನಮ್ಮ ಜವಾಬ್ದಾರಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ‘ವಿಶೇಷ ಏರ್ ಕ್ರಾಫ್ಟ್ ಮೂಲಕ ಮಧ್ಯಾಹ್ನ 2.30 ಕ್ಕೆ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಜೊತೆ ಭುವನೇಶ್ವರಕ್ಕೆ ಹೋಗುತ್ತಿದ್ದೇನೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸ್ಥಳಕ್ಕೆ ತೆರಳಬೇಕಾಗಿದೆ. ಸಂಜೆ 6-7 ಗಂಟೆಗೆ ನಾನು ದುರಂತ ಸ್ಥಳಕ್ಕೆ ತಲುಪಬಹುದು. ಅಲ್ಲಿ ಹೋದ ಮೇಲೆ ವ್ಯವಸ್ಥೆಗೆ ಏನು ಲಭ್ಯ ಇದೆ ಅಂತಾ ನೋಡಬೇಕಾಗುತ್ತದೆ. ಕನ್ನಡಿಗರಿಗೆ ಯಾವುದೇ ತೊಂದರೆ ಇದ್ದರೆ ಚಿಕಿತ್ಸೆ, ಸುರಕ್ಷಿತವಾಗಿ ಕರೆತರುವುದು ನಮ್ಮ ಜವಾಬ್ದಾರಿ ಆಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕನ್ನಡಿಗರಿಗೆ ಈಗ ಯಾರಿಗೂ ಯಾವುದೇ ಸಮಸ್ಯೆ ಆಗಿಲ್ಲ. ಯಾವ ರೀತಿ ಕರೆತರುವುದು ಎಂಬ ಬಗ್ಗೆ ಅಲ್ಲಿನ ಪರಿಸ್ಥಿತಿ ನೋಡಿ ನಿರ್ಧಾರ ಮಾಡುತ್ತೇನೆ. ದುರಂತ ಸ್ಥಳದಲ್ಲಿರುವ ಕನ್ನಡಿಗರು ನನ್ನ ಮೊಬೈಲ್ ಸಂಖ್ಯೆಗೆ 9845739999 ಸಂಪರ್ಕಿಸಬಹುದು. ನಾನು ವೈಯಕ್ತಿಕವಾಗಿ ಅಲ್ಲಿ ಅವರನ್ನು ಅಟೆಂಡ್ ಮಾಡುತ್ತೇನೆ ಎಂದರು.
ಏನಿದು ಘಟನೆ: ಇಲ್ಲಿದೆ ವಿವರ
ಒಡಿಶಾದಲ್ಲಿ (Odisha Train Tragedy) ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ದುರಂತಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 233 ಕ್ಕೆ ಏರಿದೆ. ಅಲ್ಲದೇ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಚೆನ್ನೈ-ಕೊರೊಮಂಡೆಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.