ಬೆಂಗಳೂರು: ಆರ್ಬಿಐ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನೃಪತುಂಗ ರಸ್ತೆಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಗುರುವಾರ ಪರಿಶೀಲಿಸಿದ್ದಾರೆ.
ಹಲವು ಗಂಟೆಗಳ ಶೋಧದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಸಿಗದಿದ್ದರಿಂದ, ಇದೊಂದು ಹುಸಿ ಬಾಂಬ್ ಕರೆ ಎಂಬುದಾಗಿ ಪೊಲೀಸರು ಘೋಷಿಸಿದರು.
ನಂತರ, ಕಚೇರಿ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಇನ್ನೂ ಆರ್ಬಿಐ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪದಡಿ ವೈಭವ್ ಭಗವಾನ್ ಎಂಬಾತನ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.