ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.
ಇನ್ನೂ ಮುಂದಿನ 24 ಗಂಟೆಯಲ್ಲಿ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ 40 ರಿಂದ 55 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಒಳನಾಡಿನಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆ ಆಗಲಿದೆ ಎಂದು ಹೇಳಲಾಗಿದೆ.