ಬೆಂಗಳೂರು: ಸಿಎಸ್ ವಂದಿತಾ ಶರ್ಮಾ ಅವರು ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾದರು. ಒಡಿಶಾದ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಸ್ ವಂದಿತಾ ಶರ್ಮಾ ಅವರು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ಭೇಟಿಯಾಗಿ ಕರ್ನಾಟಕದ ಎಷ್ಟು ಪ್ರಯಾಣಿಕರು ದುರಂತ ನಡೆದ ರೈಲಿನಲ್ಲಿದ್ದರು. ರೈಲು ದುರಂತದಿಂದ ನಮ್ಮ ರಾಜ್ಯದವರಿಗೆ ಏನಾದರು ಆಗಿದೆಯಾ? ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇನ್ನು ಈ ಸಂಬಂಧ ವರದಿ ಸಲ್ಲಿಸುವಂತೆ ಸಿಎಸ್ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇನ್ನು ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. ‘ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ’ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.