ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಕಳುಹಿಸುವುದಾಗಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದರು. ಈ ಹೇಳಿಕೆಗೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವುದು ಹಿಟ್ಲರ್ ಸರ್ಕಾರ.
ಇಂತಹ ಬೆದರಿಕೆಗಳು ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಮಾನ್ಯ. ಆದ್ರೆ ನಾವು ನ್ಯಾಯಾಲಯದ ಒಳಗೆ ಹೋರಾಡುತ್ತೇವೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಅಧಿಕಾರ ಸ್ವೀಕರಿಸಿದ ಹದಿನೈದು ದಿನಗಳೊಳಗೆ, ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಈ ಬಹಿರಂಗ ಬೆದರಿಕೆಗಳು ಸಿದ್ದರಾಮಯ್ಯ ಸರ್ಕಾರದ ಸಾಮಾನ್ಯ ಲಕ್ಷಣವಾಗಿದೆ ಎಂದು ರಾಷ್ಟ್ರೀಯ ಬಿಜೆಪಿ ಯುವ ಘಟಕದ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಎಂಬಿ ಪಾಟೀಲರ ಹೇಳಿಕೆಗೆ ಕಿಡಿಕಾರಿದ್ದಾರೆ.