ನವದೆಹಲಿ: ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಂಚನೆ ಮಾಡ್ತಿದೆ ಎಂದು ನವದೆಹಲಿಯಲ್ಲಿ ನಳಿನ್ ಕುಮಾರ್ ಕಟೀಲು ಹೇಳಿಕೆ ನೀಡಿದ್ದಾರೆ. ಯುದ್ಧಕ್ಕೂ ಸಿದ್ಧ, ಸ್ನೇಹಕ್ಕೂ ಸಿದ್ಧ ಎಂದು ಡಿಕೆಶಿ ಹೇಳಿದ್ದಾರೆ. ಭಾರತ ಜನತಾ ಪಾರ್ಟಿ ಯುದ್ಧಕ್ಕೆ ಸಿದ್ಧವಿದೆ.
ಕಾಂಗ್ರೆಸ್ ಸರ್ಕಾರದ ವಂಚನೆ ವಿರುದ್ಧ ಹೋರಾಟ ಮಾಡುತ್ತೇವೆ. ಘೋಷಣೆ ಮಾಡುವಾಗ ಸಿದ್ದರಾಮಯ್ಯ ಟ್ಯಾಕ್ಸ್ ಕಟ್ಟುತ್ತಿರಲಿಲ್ವೇ? ಉಚಿತ ಎಂದು ಹೇಳುವಾಗ ನಿಮಗೆ ಗೊತ್ತಾಗಲಿಲ್ವಾ. ಕಾಂಗ್ರೆಸ್ನ ಕೇಂದ್ರ ನಾಯಕರನ್ನು ಸುಳ್ಳುಗಾರರನ್ನಾಗಿ ಮಾಡಲಾಗಿದೆ. ಕಾಂಗ್ರೆಸ್ ವಂಚಕರ ಪಾರ್ಟಿ, ಸಿದ್ದರಾಮಯ್ಯ ವಂಚಕರ ನಾಯಕ ಎಂದು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ವಾಗ್ದಾಳಿ ನಡೆಸಿದರು.