ಮೈಸೂರು: ಭಜರಂಗ ದಳ ಬ್ಯಾನ್, ಗೋ ಹತ್ಯೆ ನಿಷೇಧ ಕಾಯಿದೆ ವಾಪಸ್ ವಿರೋಧಿಸಿ ಮೈಸೂರು ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ಸರ್ಕಾರ ಬಹು ಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಜನರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಇಲ್ಲದ ಷರತ್ತುಗಳನ್ನು ವಿಧಿಸಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಶ್ರೀವತ್ಸ ಆರೋಪಿಸಿದರು.