ಬೆಂಗಳೂರು: ಗೃಹಜ್ಯೋತಿ ವಿದ್ಯುತ್ ಯೋಜನೆ ಸೌಲಭ್ಯ ಪಡೆಯುವ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆಯಲ್ಲಿ ಇರಲಿ, ಬಾಡಿಗೆ ಕರಾರು ಪತ್ರ ಬೇಕು. ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ ಅಂತ ಪ್ರತ್ಯಕ್ಷವಾಗಿ ಅರ್ಜಿ ಹಾಕಲು ಅವಕಾಶ ಇದೆ ಎಂದರು.
ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆಯಪ್ ಬಿಡುಗಡೆ ಮಾಡುತ್ತೇವೆ, ಜುಲೈ ತಿಂಗಳಿನ ಬಿಲ್ ಆಗಸ್ಟ್ ನಲ್ಲಿ ಪಾವತಿ ಮಾಡುವುದು ಬೇಡ ಎಂದರು. 2 ಕೋಟಿ 14 ಲಕ್ಷ ಗ್ರಾಹಕರಿಗೆ ಈ ಯೋಜನೆ ಲಾಭ ಸಿಗುತ್ತದೆ, 2 ತಿಂಗಳ ಸರಾಸರಿ ಆಧಾರದ ಮೇಲೆ 10% ಹೆಚ್ಚು ವಿದ್ಯುತ್ ಬಳಕೆ ಉಚಿತವಾಗಿರುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ (Congress) ಸರ್ಕಾರದ ಗೃಹಜ್ಯೋತಿ (Gruha Jyoti scheme) ಗ್ಯಾರಂಟಿಗೆ (Guarantee) ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ (KJ George) ಬುಧವಾರ ಸುದ್ದಿಗೋಷ್ಠಿ ನಡೆಸಿದ್ದಾರೆ.
ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ತಿಳಿಸಿದರು