ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪೋಸ್ಟ್ ಹಾಕಿದ್ರೆ ತಕ್ಷಣವೇ ಬಂಧಿಸಲಾಗುತ್ತದೆ. ಸೇವಾ ಸಂಸ್ಥೆಗಳ ಜೊತೆಗೆ ನಾವು ಸಂಪರ್ಕದಲ್ಲಿದ್ದೇವೆ. ನಿಂದನೆ, ಹೀಯಾಳಿಸುವುದು ಸೇರಿದಂತೆ ಕೋಮು ಪ್ರಚೋದನೆ ಪೋಸ್ಟ್ ಹಾಕಿದ್ರೆ ಸಹಿಸುವುದಿಲ್ಲ.
ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಗ್ರೂಪ್ಗಳಲ್ಲೂ ಪ್ರಚೋದನಕಾರಿ ಸಂದೇಶಗಳು ಹಾಗೂ ಸುಳ್ಳು ಸುದ್ದಿಗಳು ಹರಡಿದರೆ ಅಂತಹ ಗ್ರೂಪ್ ಅಡ್ಮಿನ್ಗಳ ವಿರುದ್ಧ ಕೋಮು ಸಾಮರಸ್ಯಕ್ಕೆ ದಕ್ಕೆ ತಂದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.