ಬೆಂಗಳೂರು: ಸಿಎಂರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಮೇಶ್ ಶೆಟ್ಟಿ ದೂರು ನೀಡಿದ್ದಾರೆ, ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನೈತಿಕ ಪೊಲೀಸ್ ಗಿರಿ ತೋರಿಸಿದ್ದಾರೆ ಎಂದು ಬಿಜೆಪಿ ಲೀಗಲ್ ಸೆಲ್ನಿಂದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಸಮಾಜದಲ್ಲಿ ಶಾಂತಿ ಕಾಪಾಡಬೇಕು. ಹೀಗಾಗಿ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸಿದ್ದೇವೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಗಡುವು ನೀಡಲಾಗಿದ್ದು, ವಿಡಿಯೋ ಹಾಗೂ ದಾಖಲೆಗಳನ್ನ ಪೊಲೀಸರು ಪರೀಶೀಲಿಸುತ್ತಿದ್ದು, ಘಟನೆ ಸಂಬಂಧ ಬಹುತೇಕ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.