ಮೈಸೂರು: ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಿಷ್ಣ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯ ಯುವತಿ ಜಿಷ್ಣ(20) ವರ್ಷದ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಈಕೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ನಿವಾಸಿ.
ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದಳು.ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮೈಸೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.