ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಹನುಮಂತ ಹೊಸಮನಿ ಎಂಬುವರ ಮೇಲೆ ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಹಳ್ಳಿಕೇರಿ ಗ್ರಾಮದ ಕಾರ್ತಿಕ್ ಎಂಬುವವರಿಂದ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರೋದಾಗಿ ಆರೋಪಿಸಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಿ ಶಿಕ್ಷೆ ಕೊಡಬೇಕು ಎಂದು ಮುಂಡರಗಿ ತಾಲೂಕು ಪಂಚಾಯತಿ ಎದುರು ಪ್ರತಿಭಟನೆ ಮಾಡಿದರು. ಗ್ರಾಮ ಪಂಚಾಯಿತಿ ವಿವಿಧ ನೌಕರರು ಹಾಗೂ ತಾಲೂಕ ನೌಕರರ ಸಂಘದಿಂದ ಪ್ರತಿಭಟನೆ ಮಾಡಲಾಯಿತು. ಜಿಲ್ಲೆಯಾದ್ಯಂತ ಪದೇ ಪದೇ ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ ದೌರ್ಜನ್ಯಗಳು ನಡೆಯುತ್ತಿದ್ದು,
ನೌಕರರು ಭಯದಿಂದ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಯಾವುದೇ ಅಧಿಕಾರಿಗಳು ತಪ್ಪು ಮಾಡಿದರು ಅವರ ಮೇಲಾಧಿಕಾರಿಗಳಿಗೆ ತಿಳಿಸಲಿ ಕಾನೂನು ಪ್ರಕಾರ ಹೋರಾಟ ಮಾಡಲಿ ಆದರೆ ಕಾನೂನು ಕೈಗೆ ತೆಗೆದುಕೊಂಡು ಹಲ್ಲೆ ಮಾಡುವುದು ನೌಕರರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಈ ಹಿಂದಿನ ದಿವಸ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕೂಡ ಹಲ್ಲೆ ಮಾಡಿದ್ದರು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆಗುತ್ತಿರುವ ದೌರ್ಜನ್ಯ ಮತ್ತು ಹಲ್ಲೆಗಳನ್ನು ನಿಲ್ಲಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಂಡರಗಿ ತಾಲೂಕ ಪಂಚಾಯಿತಿ ಮುಂದೆ ಪ್ರತಿಭಟನೆ ಮಾಡಿದರು.